ಚಿಕ್ಕಬಳ್ಳಾಪುರ:ಬೆಂಗಳೂರು ಈಸ್ಟ್ ಪಾಯಿಂಟ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬಡವರಿಗೆ ಉಚಿತ ಅರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.
ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಿದ ಈಸ್ಟ್ ಪಾಯಿಂಟ್ ಆಸ್ಪತ್ರೆ ಶುಕ್ರವಾರ ನಡೆದ ಆರೋಗ್ಯ ಶಿಬಿರದಲ್ಲಿ 500ಕ್ಕೂ ಹೆಚ್ಚುಜನ ರೋಗಿಗಳು ಪಾಲ್ಗೊಂಡು ಉಚಿತವಾಗಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಶಿಬಿರದಲ್ಲಿ ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಯುವ ಮುಖಂಡರು ಪಾಲ್ಗೊಂಡಿದ್ದರು.
ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗೃತ ಕ್ರಮಗಳನ್ನು ತಿಳಿಸಿ ಜನರಿಗೆ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಹರಡದಂತೆ ಸ್ವಚ್ಛತೆ ಮತ್ತು ಅರೋಗ್ಯದ ಬಗ್ಗೆ ಹರಿವು ಮೂಡಿಸಿದ್ದಾರೆ.
ಈಗಾಗಲೇ ಗುಡಿಬಂಡೆ ತಾಲೂಕಿನಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗ ಹರಡಿದ್ದು, ಅನೇಕ ಜನರು ಚಿಕನ್ ಗುನ್ಯಾ ಜ್ವರ ದಿಂದ ಬಳಲುತ್ತಿದ್ದು, ಕೆಲಸ ಮಾಡಲು ಆಗದೇ ಪರದಾಡುತ್ತಿದ್ದಾರೆ. ಈಸ್ಟ್ ಪಾಯಿಂಟ್ ಆಸ್ಪತ್ರೆಯ ಎಂಟು ವೈದ್ಯರು ಶಿಬಿರದಲ್ಲಿ ಪಾಲ್ಗೊಂಡು ಬಡವರಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ.