ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ಆವರಣದಲ್ಲಿ ಈಸ್ಟ್ ಪಾಯಿಂಟ್ ಆಸ್ಪತ್ರೆ ಬೆಂಗಳೂರು ವತಿಯಿಂದ ಗ್ರಾಮೀಣ ಭಾಗದ ಬಡ ಜನರಿಗೆ ಉಚಿತವಾಗಿ ತಪಾಸಣಾ ಶಿಬಿರ ಏರ್ಪಸಿದ್ದು, ಹಲವು ಮಂದಿ ರೋಗಿಗಳು ಪಾಲ್ಗೊಂಡಿದ್ದರು.
ಗ್ರಾಮೀಣ ಜನರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗ್ರಾಮೀಣ ಜನರಿಗೆ ಉಪಯುಕ್ತವಾಗಲಿ ಮತ್ತು ಅವರ ಆರೋಗ್ಯ ಸಮಸ್ಯೆ ಪರಿಹರಿಸಿಕೊಳ್ಳಲೆಂದು ತಜ್ಞ ವೈದ್ಯರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿತ್ತು.
ಇತ್ತೀಚೆಗೆ ವೈದ್ಯಕೀಯ ಚಿಕಿತ್ಸೆ ಅತ್ಯಂತ ದುಬಾರಿಯಾಗಿದ್ದು, ಗ್ರಾಮೀಣ ಜನರಿಗೆ ಉಪಯುಕ್ತವಾಗಲಿ ಮತ್ತು ಅವರ ಆರೋಗ್ಯ ಸಮಸ್ಯೆ ಪರಿಹರಿಸಿಕೊಳ್ಳಲೆಂದು ತಜ್ಞ ವೈದ್ಯರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿತ್ತು.
ಗ್ರಾಮೀಣ ಭಾಗದಲ್ಲಿ ಜನರು ಉತ್ತಮ ಚಿಕಿತ್ಸೆಗಾಗಿ ದೂರ ಹೋಗಬೇಕು. ಅದರಲ್ಲೂ ವಯಸ್ಕರಿಗೆ ಹಲವಾರು ಸಮಸ್ಯೆಗಳಿರುತ್ತವೆ. ಹಾಗಾಗಿ ಈಸ್ಟ್ ಪಾಯಿಂಟ್ ಆಸ್ಪತ್ರೆ ಕೆ.ಆರ್. ಪುರಂ ಬೆಂಗಳೂರು ವತಿಯಿಂದ ಗ್ರಾಮೀಣ ಜನರಿಗಾಗಿ ಉಚಿತ ಶಿಬಿರವನ್ನು ಏರ್ಪಡಿಸಿದ್ದು, ಹಂಪಸಂದ್ರ ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ ಹಳ್ಳಿಗಳ 150ಕ್ಕೂ ಹೆಚ್ಚು ರೋಗಿಗಳು ಬಂದು ಚಿಕಿತ್ಸೆ ಪಡೆದರು.