ಚಿಕ್ಕಬಳ್ಳಾಪುರ: ಯವರ್ ಬ್ಲೂ ಗಾರ್ಮೆಂಟ್ ಕಾರ್ಖಾನೆಯಿಂದ ಗೌರಿಬಿದನೂರಿಗೆ ಬರುತ್ತಿದ್ದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನೌಕರರಿಬ್ಬರ ಸ್ಥಿತಿ ಗಂಭೀರವಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರ್ಖಾನೆಯ 50ಕ್ಕೂ ಅಧಿಕ ನೌಕರರು ಬಸ್ನಲ್ಲಿ ಸಂಚರಿಸುತ್ತಿದ್ದಾಗ ಗೌರಿಬಿದನೂರು ಸಮೀಪದ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗಾಯಗೊಂಡ 30 ಜನರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗೌರಿಬಿದನೂರು ಪುರ ಠಾಣೆಯಲ್ಲಿ ದೂರು ದಾಖಲಾಗಿದೆ.