ಚಿಕ್ಕಬಳ್ಳಾಪುರ: ಭಾನುವಾರ ಸರ್ಕಾರಿ ರಜೆ ಇದ್ದರೂ ಸಹ ಜಿಲ್ಲೆಯ ಕಸಬಾ ರಾಜಸ್ವ ನಿರೀಕ್ಷಕರಾದ ಮೋಹನ್, ಗ್ರಾಮ ಲೆಕ್ಕಾಧಿಕಾರಿ ಚಂದ್ರಶೇಖರ್,ಕಲ್ಲಹಳ್ಳಿ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಗ್ರಾಮ ಸಹಾಯಕ ಅಂಜಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ತಾಲೂಕು ಕಚೇರಿಯಲ್ಲಿ ಬಿಡುವಿಲ್ಲದೆ ಕೆಲಸ ನಿರ್ವಹಿಸುತ್ತಿದ್ದಾರೆ.
ರಜಾ ದಿನದಲ್ಲೂ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಗಳು; ಸಾರ್ವಜನಿಕರಿಂದ ಪ್ರಶಂಸೆ
ಭಾನುವಾರ ಸರ್ಕಾರಿ ರಜೆ ಇದ್ದರೂ ಸಹ ಜಿಲ್ಲೆಯ ಕಸಬಾ ರಾಜಸ್ವ ನಿರೀಕ್ಷಕ ಮೋಹನ್, ಗ್ರಾಮ ಲೆಕ್ಕಾಧಿಕಾರಿ ಚಂದ್ರಶೇಖರ್,ಕಲ್ಲಹಳ್ಳಿ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ , ಗ್ರಾಮ ಸಹಾಯಕ ಅಂಜಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ತಾಲೂಕು ಕಚೇರಿಯಲ್ಲಿ ಬಿಡುವಿಲ್ಲದೆ ಕೆಲಸ ನಿರ್ವಹಿಸುತ್ತಿದ್ದಾರೆ.
ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್, ಇತ್ತೀಚೆಗೆ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಾರ್ವಜನಿಕರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಸ್ಪಂದಿಸಿ ಬಗೆಹರಿಸಬೇಕೆಂದು ಸೂಚನೆ ನೀಡಿದ್ದರು. ಸದ್ಯ ಅದರಂತೆ ಸ್ವಾತಂತ್ರ್ಯ ದಿನಾಚರಣೆ ದಿನದಂದು ಹಕ್ಕು ಪತ್ರಗಳನ್ನು ವಿತರಿಸುವ ಸಲುವಾಗಿ, 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ, ಅರ್ಹ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ, ಕಡತಗಳನ್ನು ಸ್ವೀಕರಿಸಿ ರಜಾ ದಿನದಂದು ಕೆಲಸ ನಿರ್ವಹಿಸುತ್ತಿದ್ದಾರೆ.
ಜಿಲ್ಲಾಧಿಕಾರಿ ಆದೇಶದಂತೆ ನಾವು ಭಾನುವಾರದಂದು ಕೆಲಸ ನಿರ್ವಹಿಸಲು ತೀರ್ಮಾನಿಸಿದ್ದೇವೆ ಎಂದು ಕಸಾಬ ರಾಜಸ್ವ ನಿರೀಕ್ಷಕರಾದ ಮೋಹನ್ ಹೇಳಿದ್ರು.