ಚಿಕ್ಕಬಳ್ಳಾಪುರ/ಚಿಂತಾಮಣಿ :ರಾಜ್ಯದ ಮಲೆನಾಡು ಪ್ರದೇಶದಲ್ಲಿ ಮಳೆ ಪ್ರವಾಹವಾಗಿ ರೈತರು ಮನೆ ಭೂಮಿ ಕಳೆದುಕೊಂಡು ಅನಾಥರಾಗಿದ್ದಾರೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೆ ವರ್ತಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಎರಡು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಭೀಕರ ಮಳೆ ಮತ್ತು ಪ್ರವಾಹದಿಂದ ದುರಂತ ಸಂಭವಿಸಿದೆ. ಅಲ್ಲಿನ ಜನರ ಸಮಸ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಲಕ್ಷ್ಯ ವಹಿಸಿದ್ದಾರೆ. ಒಂದು ಲಕ್ಷ ಕೋಟಿಯಷ್ಟು ಬೆಲೆಬಾಳುವ ಭೂಮಿ, ಮನೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅಕ್ಟೋಬರ್ 10 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.