ಚಿಕ್ಕಬಳ್ಳಾಪುರ:ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ.
ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗರತ್ನಮ್ಮ ಅವರ ಪತಿ ರಾಮಕೃಷ್ಣಪ್ಪ(56) ಕೊಲೆಯಾದವರು. ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಡೈರಿಗೆ ಹಾಲು ತರಲು ಹೋಗಿದ್ದಾಗ ಅಣ್ಣನ ಮಗ ನಾಗರಾಜ್ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡ ರಾಮಕೃಷ್ಣಪ್ಪ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಬಿದ್ದು ಅಸುನೀಗಿದ್ದಾರೆ. ಆರೋಪಿ ನಾಗರಾಜ್ ಪರಾರಿಯಾಗಿದ್ದಾನೆ.
ಚಿಕ್ಕಬಳ್ಳಾಪುರ ಎಸ್ಪಿಡಿಎಲ್ ನಾಗೇಶ್, ಗೌರಿಬಿದನೂರು ವೃತ್ತ ನಿರೀಕ್ಷಕ ಸತ್ಯನಾರಾಯಣ, ಗೌರಿಬಿದನೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಫ್ಎಸ್ಎಲ್ ಹಾಗೂ ಶ್ವಾನ ದಳ ಸ್ಥಳಕ್ಕೆ ಆಗಮಿಸಿತ್ತು. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.