ಚಿಕ್ಕಬಳ್ಳಾಪುರ:ಬಿಜೆಪಿಯವರು ಹಣದಿಂದ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ. ಈ ಹಿಂದೆ ಮೈತ್ರಿ ಸರ್ಕಾರದ ಅವಧಿಯಲ್ಲಿ 18 ಶಾಸಕರನ್ನು ಖರೀದಿಸಿ ಕುತಂತ್ರದ ರಾಜಕಾರಣ ಮಾಡಿದ್ದರು. ಈ ಮೂಲಕ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಪರ ಅವರು ಮತಯಾಚನೆ ಮಾಡಿದರು. ಈ ಚುನಾವಣೆಗೆ ಜಿಲ್ಲಾ ಮಂತ್ರಿಗಳು ಅವರ ಅಭಿವೃದ್ಧಿಯ ಹೆಸರಿನಲ್ಲಿ ಮತ ಕೇಳುತ್ತಿಲ್ಲ. ಬಿಜೆಪಿಯವರು ಹಣದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ತಿಳಿದುಕೊಂಡಿದ್ದಾರೆ. ರಾಜಾರೋಷವಾಗಿ ಎಲ್ಲವೂ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದು ದುಸ್ಸಾಹಸವಾಗಿದೆ ಎಂದು ಹೇಳಿದರು.