ಚಿಂತಾಮಣಿ :ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾ ಸ್ಥಳವಾದ ಚಿಂತಾಮಣಿ ತಾಲೂಕಿನ ಮುರಗಮಲ್ಲಾ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದೆ. ಭಕ್ತರಿಂದ ಕಾಣಿಕೆ ರೂಪದಲ್ಲಿ ₹28,44,930 ಹಣ ಸಂಗ್ರಹವಾಗಿದೆ.
ಪ್ರತಿ ಮೂರು ತಿಂಗಳಿಗೊಮ್ಮೆ ದರ್ಗಾದ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಇಂದು ಚಿಕ್ಕಬಳ್ಳಾಪುರ ಜಿಲ್ಲಾ ವಕ್ಫ್ ಬೋರ್ಡ್ನ ಅಧಿಕಾರಿ ರಜಿಯಾ ಸುಲ್ತಾನಾ ನೇತೃತ್ವದಲ್ಲಿ ಎಣಿಕೆ ಕಾರ್ಯ ನಡೆಸಲಾಯಿತು. ಹುಂಡಿ ಎಣಿಕೆ ಕಾರ್ಯಕ್ರಮ ಮುಕ್ತಾಯವಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, ಮಾರ್ಚ್ ತಿಂಗಳ 28ರಂದು ರಾಜ್ಯ ವಕ್ಫ್ ಬೋರ್ಡ್ನಲ್ಲಿ ಸಭೆಯ ನಿರ್ಣಯದಂತೆ ಅಭಿವೃದ್ಧಿ ಮಾಡಲಾಗುವುದು.