ಚಿಕ್ಕಬಳ್ಳಾಪುರ :ಹೊಸ ಪೀಳಿಗೆಗೆ ತಕ್ಕಂತೆ ಶಿಕ್ಷಣದ ಪದ್ಧತಿ ಬದಲಿಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕಾದ್ರೆ ಶಿಕ್ಷಕರು ಕಲಿಕೆಯಲ್ಲಿ ಹೊಸ ಆವಿಷ್ಕಾರಗಳನ್ನು ಮೈಗೂಡಿಸಿಕೊಂಡು ಮಕ್ಕಳ ಕಲಿಕೆಗೆ ಉತ್ಸಾಹ ತುಂಬಿ ಆ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ಹೇಳಿದರು.
ಹೊಸ ಪೀಳಿಗೆಗೆ ತಕ್ಕಂತೆ ಶಿಕ್ಷಣದ ಪದ್ಧತಿ ಬದಲಿಸಿ : ಸಚಿವ ಡಾ. ಕೆ ಸುಧಾಕರ್ - Health Minister Sudhakar
ಕಲಿಕೆಯಲ್ಲಿ ಶಿಕ್ಷಕರು ಉತ್ಸಾಹದಿಂದ ತೊಡಗಿಕೊಂಡು ಮಕ್ಕಳಿಗೆ ಪ್ರೀತಿ, ವಾತ್ಸಲ್ಯದಿಂದ ಪಾಠ ಮಾಡಬೇಕು. ಸಮಾಜದಲ್ಲಿರುವ ಜಾತಿ ಪದ್ಧತಿ, ಅಜ್ಞಾನ, ಭ್ರಷ್ಟಾಚಾರ ತೊಡೆದು ಹಾಕಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ..
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲಿಕೆಯಲ್ಲಿ ಶಿಕ್ಷಕರು ಉತ್ಸಾಹದಿಂದ ತೊಡಗಿಕೊಂಡು ಮಕ್ಕಳಿಗೆ ಪ್ರೀತಿ, ವಾತ್ಸಲ್ಯದಿಂದ ಪಾಠ ಮಾಡಬೇಕು. ಸಮಾಜದಲ್ಲಿರುವ ಜಾತಿ ಪದ್ಧತಿ, ಅಜ್ಞಾನ, ಭ್ರಷ್ಟಾಚಾರ ತೊಡೆದು ಹಾಕಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದರು.
ಇದೇ ವೇಳೆ 2020-21ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.