ಗೌರಿಬಿದನೂರು(ಚಿಕ್ಕಬಳ್ಳಾಪುರ): ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣದ ಸುದ್ದಿ ಕೇಳಿ ಕನ್ನಡ ಪರ ಸಂಘಟನೆ ತಾಲೂಕು ಅಧ್ಯಕ್ಷ ಹೃದಯಾಘಾತಕ್ಕೆ ಒಳಗಾಗಿರುವ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ಪುನೀತ್ ಸಾವಿನ ಸುದ್ದಿ ಕೇಳಿ ಕನ್ನಡ ಪರ ಹೋರಾಟಗಾರನಿಗೆ ಹೃದಯಾಘಾತ ; ಆಸ್ಪತ್ರೆಯಲ್ಲಿ ಚಿಕಿತ್ಸೆ - ಗೌರಿಬಿದನೂರು
ನಟ ಪುನೀತ್ ರಾಜ್‌ಕುಮಾರ್ ಸಾವಿನ ಸುದ್ದಿ ಇಡೀ ರಾಜ್ಯಕ್ಕೆ ಬರ ಸಿಡಿಲು ಬಡಿದಂತಾಗಿದೆ. ಕನ್ನಡ ಪರ ಸಂಘಟನೆ ತಾಲೂಕು ಅಧ್ಯಕ್ಷರು ಅಪ್ಪು ಅವರ ಸಾವಿನ ಸುದ್ದಿ ತಿಳಿದು ಹೃದಯಾಘಾತಕ್ಕೆ ಒಳಗಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ..
![ಪುನೀತ್ ಸಾವಿನ ಸುದ್ದಿ ಕೇಳಿ ಕನ್ನಡ ಪರ ಹೋರಾಟಗಾರನಿಗೆ ಹೃದಯಾಘಾತ ; ಆಸ್ಪತ್ರೆಯಲ್ಲಿ ಚಿಕಿತ್ಸೆ heart attack to puneeth rajkumar fan in chikkamagaluru district](https://etvbharatimages.akamaized.net/etvbharat/prod-images/768-512-13504213-thumbnail-3x2-ckb.jpg)
ಪುನೀತ್ ಸಾವಿನ ಸುದ್ದಿ ಕೇಳಿ ಕನ್ನಡ ಪರ ಹೋರಾಟಗಾರನಿಗೆ ಹೃದಯಾಘಾತ; ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಧಿಮೂರ್ತಿರೆಡ್ಡಿ ಹೃದಯಾಘಾತಕ್ಕೆ ಒಳಗಾದವರು. ಇದೀಗ ಬೆಂಗಳೂರಿನ ಯಲಹಂಕ ಆಸ್ಪೆತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಪುನೀತ್ ಅವರ ಸಾವಿನ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದನ್ನು ವೀಕ್ಷಿಸಿದ ಅಧಿಮೂರ್ತಿರೆಡ್ಡಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಅಸ್ಪೆತ್ರೆ ರವಾನಿಸಿದರು ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ನವಚೈತನ್ಯ ಆಸ್ಪೆತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ.