ಕರ್ನಾಟಕ

karnataka

ETV Bharat / state

ಬಾಗೇಪಲ್ಲಿಯಲ್ಲಿ ಧಾರಾಕಾರ ಮಳೆ: ಧರೆಗುರುಳಿದ ಮರಗಳು - ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ

ಬಾಗೇಪಲ್ಲಿ ಪಟ್ಟಣದಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ಹತ್ತಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.

Heavy Rain in Bagepalli
ಬಾಗೇಪಲ್ಲಿಯಲ್ಲಿ ಧಾರಕಾರ ಮಳೆ..ಧರೆಗುರುಳಿದ ಮರಗಳು

By

Published : Apr 24, 2020, 1:54 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಿನ್ನೆ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ಹತ್ತಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.

ಬಾಗೇಪಲ್ಲಿ ಮುಖ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳ ತುಂಬೆಲ್ಲಾ ಮರದ ಕೊಂಬೆಗಳು ನೆಲಕ್ಕುರುಳಿ ಅವಾಂತರ ಸೃಷ್ಟಿಯಾಗಿದೆ. ಲಾಕ್​ಡೌನ್ ಹಿನ್ನೆಲೆ ಪಟ್ಟಣದಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್​ಗಳಲ್ಲಿ ಪೊಲೀಸ್ ಸಿಬ್ಬಂದಿ ಮಳೆಯಿಂದ ತಪ್ಪಿಸಿಕೊಳ್ಳಲು ಪರದಾಡಿದರು.

ABOUT THE AUTHOR

...view details