ಬೆಂಗಳೂರು:ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಯಲ್ಲಿ ಮೂಲಸೌಕರ್ಯ ಒದಗಿಸುವ ವಿಚಾರ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಚಿಕ್ಕಬಳ್ಳಾಪುರದ ಚಂಬಳ್ಳಿ ಗ್ರಾಮದ ಎಸ್.ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ನ್ಯಾಯಪೀಠ ಈ ಆದೇಶ ಮಾಡಿ ವಿಚಾರಣೆಯನ್ನು ಸೆ.19ಕ್ಕೆ ಮಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ವಾದ ಮಂಡಿಸಿ, ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯದಿಂದ ಎಪಿಎಂಸಿ ಮಾರುಕಟ್ಟೆ ಕೊಳಚೆ ಪ್ರದೇಶವಾಗಿದೆ. ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸುವಂತೆ ಸ್ಥಳೀಯ ಹೂವು ಬೆಳೆಗಾರರು ಮತ್ತು ವ್ಯಾಪಾರಸ್ಥರು 2021ರ ನ.24ರಂದು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮಾರುಕಟ್ಟೆಯಲ್ಲಿರುವ ಕಸ ತೆರವು, ರಸ್ತೆ ನಿರ್ಮಾಣ, ಬೀದಿ ದೀಪ ಹಾಗೂ ಗೇಟ್ ಅಳವಡಿಕೆ, ಮಾರುಕಟ್ಟೆ ಒಳಗೆ ವಾಹನಗಳ ಸಂಚಾರ ನಿರ್ಬಂಧಿಸಬೇಕು ಎಂಬುದಾಗಿ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿದರು.
ಇದನ್ನೂ ಓದಿ: ಹೈಕೋರ್ಟ್ನಲ್ಲಿ ಆಂಗ್ಲ ಭಾಷೆಯೊಂದಿಗೆ ಕನ್ನಡ ಅನುಷ್ಠಾನ ಜಾರಿ ಮಾಡಲು ವಕೀಲರ ಆಗ್ರಹ