ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಗಂಡನ ವಿವಾಹೇತರ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ - etv bharat kannada

ಗಂಡನ ವಿವಾಹೇತರ ಸಂಬಂಧ ಹಾಗೂ ಆತನ ಕಿರುಕುಳದಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬಾಗೇಪಲ್ಲಿಯಲ್ಲಿ ನಡೆದಿದೆ.

house-wife-committed-suicide-in-bagepalli
ಗೃಹಿಣಿ ಆತ್ಮಹತ್ಯೆ

By

Published : Nov 23, 2022, 5:16 PM IST

ಚಿಕ್ಕಬಳ್ಳಾಪುರ:ಗಂಡನಿಗೆ ಬೇರೊಬ್ಬ ಮಹಿಳೆ ಜೊತೆ ವಿವಾಹೇತರ ಸಂಬಂಧ ಹಾಗೂ ಆತನ ಕಿರುಕುಳದಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸಂತೆಬೀದಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಮೋನಿಕಾ(32) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಎಸ್ ಗುಂಡ್ಲುಹಳ್ಳಿ ಗ್ರಾಮದ ಮೋನಿಕಾರನ್ನು 13 ವರ್ಷಗಳ ಹಿಂದೆ ಬಾಗೇಪಲ್ಲಿ ಪಟ್ಟಣದ ಸಂತೆಬೀದಿ ಬಡಾವಣೆಯ ಗುರುಮೂರ್ತಿ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಪೋಷಕರು 50 ಲಕ್ಷ ರೂ. ಮೌಲ್ಯದ ಜಮೀನು ಮಾರಾಟ ಮಾಡಿ 40 ಲಕ್ಷ ವೆಚ್ಚದಲ್ಲಿ ಅದ್ಧೂರಿ ವಿವಾಹ ಮಾಡಿದ್ದರು ಎಂದು ತಿಳಿದುಬಂದಿದೆ.

ಆದರೆ ಗುರುಮೂರ್ತಿ ಬೇರೊಬ್ಬ ಮಹಿಳೆ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು. ಅಲ್ಲದೆ ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗ್ತಿದೆ. ಇದರಿಂದ ಬೇಸತ್ತ ಮೋನಿಕಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿ ಗುರುಮೂರ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೃತಳ ತಂದೆ ರಾಮಕೃಷ್ಣಪ್ಪ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಬಗ್ಗೆ ಬಾಗೇಪಲ್ಲಿ ಠಾಣೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಪ್ರೀತಿಸಲು ನಿರಾಕರಿಸಿದ ಯುವತಿ: ಮನೆಗೆ ನುಗ್ಗಿ ಹತ್ಯೆ ಮಾಡಿದ ಯುವಕ

ABOUT THE AUTHOR

...view details