ಚಿಕ್ಕಬಳ್ಳಾಪುರ:ಕುರುಬರ ಸಂಘದ ವತಿಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ವಿದ್ಯಾರ್ಥಿ ನಿಲಯಕ್ಕೆ ಇಂದು ಗುದ್ದಲಿ ಪೂಜೆ ಮಾಡಲಾಗಿದ್ದು, ಸಚಿವ ಎಂಟಿಬಿ ನಾಗರಾಜ್ ಅವರು ಚಾರಿಟಬಲ್ ಟ್ರಸ್ಟ್ ವತಿಯಿಂದ 25 ಲಕ್ಷ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಅವರು ಮಾತನಾಡಿದರು ನಗರದ ಚಾಮರಾಜಪೇಟೆಯಲ್ಲಿ ಇಂದು ಕುರುಬರ ಸಂಘದ ವತಿಯಿಂದ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆ ಹಮ್ಮಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಹೆಚ್ ಎಂ ರೇವಣ್ಣ, ಮಾಜಿ ಸಚಿವ ಅವರನ್ನು ಆಹ್ವಾನಿಸಿ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಇನ್ನು ಗುದ್ದಲಿ ಪೂಜೆಯ ನಂತರ ಸಚಿವ ಎಂಟಿಬಿ ನಾಗರಾಜ್ ಕುರುಬರ ಸಂಘದ ವಿದ್ಯಾರ್ಥಿನಿಲಯಕ್ಕೆ 25 ಲಕ್ಷ ಸ್ಥಳದಲ್ಲೇ ದೇಣಿಗೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.
ಕೆಲವು ತಿಂಗಳುಗಳಿಂದ ಸಚಿವ ಸಂಪುಟ ವಿಸ್ತರಣೆ ಆಗುತ್ತಿದೆ. ಆದರೆ, ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿಲ್ಲ. ಸಮಯ ನಿಗದಿಯಾದರೆ ಸಚಿವ ಸಂಪುಟ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಕುರುಬ ಸಮುದಾಯವನ್ನು ಎಸ್ಟಿ ಸಮುದಾಯ ವರ್ಗಕ್ಕೆ ಸೇರಿಸುವ ವಿಚಾರಕ್ಕೆ ಉತ್ತರಿಸಿದ ಸಚಿವ ನೂರಾರು ವರ್ಷಗಳಿಂದ ಸಮುದಾಯವನ್ನು ಎಸ್ಟಿಗೆ ಸೇರಿಸುವ ಬೇಡಿಕೆ ಇದೆ. ಇದರ ಸಲುವಾಗಿ ಸಾಕಷ್ಟು ಹೋರಾಟಗಳು ನಡೆದಿವೆ. ಸದ್ಯ ನಿರಂಜನಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಈಶ್ವರಪ್ಪ, ಸಮುದಾಯ ಮುಖಂಡರೆಲ್ಲ ಸೇರಿ ಸಭೆ ಮಾಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಪರಿಶೀಲನೆ ಮಾಡಿ ಜಾರಿ ತರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಇನ್ನು ಡಿ ಕೆ ಶಿವಕುಮಾರ್ ಮರಳಿ ಪಕ್ಷಕ್ಕೆ ಬನ್ನಿ ಎಂಬ ಹೇಳಿಕೆ ವಿಚಾರಕ್ಕೆ ಸ್ಪಷ್ಟಪಡಿಸಿದ ಸಚಿವ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಕರೆದಿದ್ದಾರೆ. ಯಾರು ಹೋಗುತ್ತಾರೋ ಇರುತ್ತಾರೋ ಗೊತ್ತಿಲ್ಲ. ಆದರೆ, ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ. ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದೇನೆ. ಮುಂದಿನ ಚುನಾವಣೆಯಲ್ಲಿ ಹೊಸಕೋಟೆಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಓದಿ:ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣ: ನನ್ನನ್ನು ಸೇರಿಸಿ ತನಿಖೆ ನಡೆಸಲಿ ಎಂದ ಸಚಿವ ಎಂಟಿಬಿ ನಾಗರಾಜ್