ಕರ್ನಾಟಕ

karnataka

By

Published : Jun 2, 2019, 2:28 AM IST

ETV Bharat / state

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ: ಸುಧಾಕರ್​​

ಸಮ್ಮಿಶ್ರ ಸರ್ಕಾರದ ನಡೆ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಅಸಮಾಧಾನದ ಮಾತುಗಳನ್ನಾಡುತ್ತಿದ್ದ ಶಾಸಕ ಡಾ. ಕೆ. ಸುಧಾಕರ್ ಅವರು ಈಗ ದೋಸ್ತಿಗಳ ಪರ ಸಾಫ್ಟ್ ಕಾರ್ನರ್ ತೋರಿದ್ದಾರೆ.

ಸುಧಾಕರ್​

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ನಡೆ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಅಸಮಾಧಾನದ ಮಾತುಗಳನ್ನಾಡುತ್ತಿದ್ದ ಶಾಸಕ ಡಾ. ಕೆ. ಸುಧಾಕರ್ ಅವರು ಈಗ ದೋಸ್ತಿಗಳ ಪರ ಸಾಫ್ಟ್ ಕಾರ್ನರ್ ತೋರಿದ್ದಾರೆ.

ನಗರದಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಂದಿನ ಚುನಾವಣೆಗಳಿಗೆ ತಳಮಟ್ಟದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಒಂದಾಗಲೇಬೇಕು. ಈ ಅನಿವಾರ್ಯತೆಯನ್ನು ಲೋಕಸಭಾ ಚುನಾವಣೆಯ ಫಲಿತಾಂಶ ತೋರಿಸಿಕೊಟ್ಟಿದೆ. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಎಲ್ಲಾ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಫಲಿತಾಂಶ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.

ರಾಜಕೀಯವಾಗಿ ನಮ್ಮ ಬೇರುಗಳನ್ನು ಗಟ್ಟಿ ಮಾಡಿಕೊಳ್ಳುವ ಅವಶ್ಯಕತೆ ಇದೆ. ಫಲಿತಾಂಶದ ನಂತರ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವ ಮುಖಾಂತರ ಅಭಿವೃದ್ಧಿ ಮಾಡಲು ನಾವೆಲ್ಲಾ ತೀರ್ಮಾನಿಸಿದ್ದೇವೆ. ಚುನಾವಣೆಯ ಹಿಂದೆ ಇದ್ದಂತಹ ನಂಬಿಕೆ ವಿಶ್ವಾಸದ ಕೊರತೆಗಳು ಈಗ ಮುಗಿದ ಅಧ್ಯಾಯ. ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ನಾಯಕರು ಎಲ್ಲವನ್ನೂ ಕೂಲಂಕಷವಾಗಿ ವಿಚಾರ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಅವರನ್ನು ನಾವು ನಂಬಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಹೊಸ ಅಧ್ಯಾಯ ಶುರುವಾಗಿದೆ ಎಂದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಯಾವ ಸ್ಥಾನಕ್ಕಾಗಿಯೂ ನಾನು ಮನವಿ, ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಮೂಲಕ ಇಷ್ಟು ದಿನ ಆಪರೇಷನ್ ಕಮಲ ಅಂತ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಶಾಸಕರು ಈಗ ಯೂ ಟರ್ನ್ ಹೊಡೆದರಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

For All Latest Updates

TAGGED:

ABOUT THE AUTHOR

...view details