ಕರ್ನಾಟಕ

karnataka

ETV Bharat / state

ಅಂತರ್ಜಲ ಚೇತನ ಯೋಜನೆ ಅನುಷ್ಠಾನಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಕಲ ಸಿದ್ಧತೆ - ಅಂತರ್ಜಲ ಚೇತನ ಯೋಜನೆ ಅನುಷ್ಠಾನ

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಸುಮಾರು 52 ಕಿರು ಜಲಾನಯನಗಳಲ್ಲಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳ ಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

Groundwater   project
ಅಂತರ್ಜಲ ಚೇತನ ಯೋಜನೆ ಅನುಷ್ಠಾನಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಕಲ ಸಿದ್ದತೆ

By

Published : May 18, 2020, 5:43 PM IST

ಚಿಕ್ಕಬಳ್ಳಾಪುರ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳ ಯೋಜನೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಅಂತರ್ಜಲ ಚೇತನ ಯೋಜನೆ ಅನುಷ್ಠಾನಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಕಲ ಸಿದ್ಧತೆ
ಸುಮಾರು 52 ಕಿರು ಜಲಾನಯನಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸುಮಾರು 1,377 ಚ.ಕಿ ಮೀಟರ್ ಪ್ರದೇಶದಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಯೋಜನೆ ಮಾಡಲಾಗಿದೆ. ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್​. ಈಶ್ವರಪ್ಪ ಕಾಮಗಾರಿಗಳ ಮಾಸಾಚರಣೆ ಉದ್ಘಾಟನೆಯನ್ನು ಮಾಡಲಿದ್ದಾರೆ. ಸದ್ಯ ಇಂದು ಜಿಲ್ಲೆಯ ಸಿಇಒ ಪೌಝಿಯಾ ತರುನಮ್ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚಿಕ್ಕನರಸಿಂಹಯ್ಯ ಸುದ್ದಿಗೋಷ್ಠಿ ನಡೆಸಿ ಅಂತರ್ಜಲ‌ ಮಟ್ಟವನ್ನು ಹೆಚ್ಚಿಸಲು ಜಿಲ್ಲೆಯಲ್ಲಿ‌ ತಗೆದುಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.


ಇನ್ನು ಜಿಲ್ಲೆಯಲ್ಲಿ ಅಂತರ್ಜಲ‌ ಯೋಜನೆಯಡಿ ನದಿ ಪುನಃಶ್ಚೇತನ, ಜಲಾಮೃತ- ಜಲಾನಯನ ಅಭಿವೃದ್ಧಿ ಹಾಗೂ ಜಲಸಂರಕ್ಷಣೆ ಯೋಜನೆಯಡಿ ಒಟ್ಟು 15,979 ಕಾಮಗಾರಿಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.


ABOUT THE AUTHOR

...view details