ಚಿಕ್ಕಬಳ್ಳಾಪುರ:73ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಚಿಕ್ಕಬಳ್ಳಾಪುರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬರ ಆವರಿಸಿದೆ. ಅಂತರ್ಜಲಮಟ್ಟ ವೃದ್ಧಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿವರಿಸಿ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ನೀರಿನ ಸಂರಕ್ಷಣೆ, ಪರಿಸರ ರಕ್ಷಣೆ, ಸ್ವಚ್ಛತೆ ಕುರಿತಾದ ನಾಟಕಗಳು ಹಾಗೂ ನೃತ್ಯರೂಪಕಗಳು ಆಯೋಜನೆಗೊಂಡಿದ್ದವು.
ಇದೇ ವೇಳೆ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಹಣವನ್ನು ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಯಿತು. ಹಿರಿಯ ನಾಗರಿಕರಿಗೆ, ಸಾಧಕರಿಗೆ, ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.