ಚಿಕ್ಕಬಳ್ಳಾಪುರ: ಐಪಿಎಲ್ ಕ್ರಿಕೆಟ್ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿಂತಾಮಣಿ ನಗರಠಾಣೆ ಪೊಲೀಸ್ ಕಾನ್ಸ್‌ಟೇಬಲ್ ಎಂ.ಕೆ ಮಂಜುನಾಥ್ ಬಂಧಿತ ಪೊಲೀಸ್ ಕಾನ್ಸ್‌ಟೇಬಲ್ ಎಂದು ತಿಳಿದು ಬಂದಿದೆ.
ಅಕ್ಟೋಬರ್ 1ರಂದು ನಗರದ ಗಜಾನಾನ ಸರ್ಕಲ್ ಬಳಿ 5 ಜನರ ಗುಂಪು ಪಂಜಾಬ್ ಹಾಗೂ ಮುಂಬೈ ತಂಡಗಳ ನಡುವೆ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಆನಂದ್ ಕುಮಾರ್ ದಾಳಿ ನಡೆಸಿ ನವೀನ್, ಸುಲೈಮಾನ್, ಶ್ರೀನಿವಾಸ್, ಮಾರುತಿ, ಮನೋಹರ್ ಎಂಬುವವರನ್ನು ಬಂಧಿಸಲಾಗಿತ್ತು. ಇನ್ನು ಆರೋಪಿಗಳಿಂದ 5 ಮೊಬೈಲ್ ಹಾಗೂ 6,970 ರೂ. ಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಆದರೆ, ಈ ಬೆಟ್ಟಿಂಗ್ ಹಿಂದೆ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಭಾಗಿಯಾಗಿರುವ ಬಗ್ಗೆ ಎಸ್ಪಿ ಮಿಥುನ್ ಕುಮಾರ್‌ಗೆ ಮಾಹಿತಿ ದೊರೆತಿದ್ದು, ಕಳೆದ 10 ದಿನಗಳ ಹಿಂದೆ ಸೇವೆಯಿಂದ ಅಮಾನತು ಮಾಡಲಾಗಿತ್ತು. ಇನ್ನು ಘನ ನ್ಯಾಯಾಲಯವು ಆರೋಪಿ ಮಂಜುನಾಥ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.