ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಇದೆ, ಮುಖ್ಯಮಂತ್ರಿ ಬಿಎಸ್‌ವೈ ಇದ್ದಾರೆ. ನಾವು ಮಾತನಾಡದೇ ಇರುವುದು ಒಳ್ಳೆಯದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಅತಿಯಾದ ಮಳೆಯಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ ನೆರೆ ಸಂತ್ರಸ್ತ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಿದ್ದೇವೆ. ಕಾಳಜಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.