ಚಿಂತಾಮಣಿ:ಕಳೆದ ನವೆಂಬರ್ 22 ರಂದು ತಾಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಗಳಲ್ಲಿ 10 ಜೆಡಿಎಸ್ ಬೆಂಬಲಿಗರು ಜಯಭೇರಿ ಬಾರಿಸಿದ್ದು, ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು.
ಜೆಡಿಎಸ್ ತೆಕ್ಕೆಗೆ ಕುರುಬೂರು ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ - ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ
ಚಿಂತಾಮಣಿ ತಾಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ವೆಂಕಟರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಕೆ.ಎಂ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರೇಷ್ಮೆ
ತಾಲೂಕಿನ ಕುರುಬೂರು ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ವೆಂಕಟರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಕೆ.ಎಂ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮದ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಎಂ ವೆಂಕಟರೆಡ್ಡಿ ಮಾತನಾಡಿ, ಸಂಘದ ವ್ಯಾಪ್ತಿಯ ಎಲ್ಲ ಗ್ರಾಮದ ರೈತರಿಗೆ ವ್ಯವಸಾಯಕ್ಕೆ ಸಂಬಂಧಿಸಿದ ಉಪಕರಣಗಳು, ರಸಗೊಬ್ಬರ, ಕೀಟನಾಶಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದರು.