ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಶೀಘ್ರಲಿಪಿಗಾರ ಗ್ರೇಡ್ 3, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಗಾರ, ಚಾಲಕ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಶೀಘ್ರಲಿಪಿಗಾರ 8, ಟೈಪಿಸ್ಟ್ 14, ಟೈಪಿಸ್ಟ್- ಕಾಪಿಸ್ಟ್ 6, ಪ್ರೊಸೆಸ್ ಸರ್ವರ್ 11, ಚಾಲಕ 1, ಜವಾನ 5
ವಿದ್ಯಾರ್ಹತೆ: ಶೀಘ್ರಲಿಪಿಗಾರ, ಟೈಪಿಸ್ಟ್, ಟೈಪಿಸ್ಟ್-ಕಾಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು. ಪ್ರೊಸೆಸ್ ಸರ್ವರ್, ಚಾಲಕ ಮತ್ತು ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.