ಬಾಗೇಪಲ್ಲಿ:ನಿರಾಶ್ರಿತ ಕೇಂದ್ರಗಳಿಗೆ ಭೇಟಿ ನೀಡಿ ನಿರಾಶ್ರಿತರಿಗೆ ಆರೋಗ್ಯ ಚಿಕಿತ್ಸೆ ಹಾಗೂ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಕೆ.ಅಮರನಾರಾಯಣ ತಿಳಿಸಿದರು.
ಬಾಗೇಪಲ್ಲಿ ನಿರಾಶ್ರಿತರ ಕೇಂದ್ರಕ್ಕೆ ನ್ಯಾಯಾಧೀಶ ಕೆ.ಅಮರನಾರಾಯಣ ಭೇಟಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಅಂಬೇಡ್ಕರ್ ವಸತಿ ನಿಲಯದಲ್ಲಿನ ನಿರಾಶ್ರಿತ ಕೇಂದ್ರಗಳಿಗೆ ಭಾನುವಾರ ಭೇಟಿ ಪರಿಶೀಲಿಸಿ, ನಿರಾಶ್ರಿತರಿಂದ ಮಾಹಿತಿ ಸಂಗ್ರಹಿಸಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂಬೇಡ್ಕರ್ ವಸತಿ ನಿಲಯದಲ್ಲಿನ ನಿರಾಶ್ರಿತ ಕೇಂದ್ರಗಳಿಗೆ ಭಾನುವಾರ ಭೇಟಿ ಪರಿಶೀಲಿಸಿ, ನಿರಾಶ್ರಿತರಿಂದ ಮಾಹಿತಿ ಸಂಗ್ರಹಿಸಿದರು.
ಚಿಕ್ಕಬಳ್ಳಾಪುರ ಆಡಳಿತ ನ್ಯಾಯಾಧೀಶ ಸುನಿಲ್ ದತ್ತಯಾದವ್ ಆದೇಶದ ಮೇರೆಗೆ ಜಿಲ್ಲೆಯ ನಿರಾಶ್ರಿತ ಕೇಂದ್ರಗಳಿಗೆ ಭೇಟಿ ನೀಡಲಾಗುತ್ತಿದೆ. ನಿರಾಶ್ರಿತರ ಮಾಹಿತಿ ಪಡೆದು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ನಿರಾಶ್ರತರ ಆರೋಗ್ಯ ವಿಚಾರಿಸಿದ ಕೆ.ಅಮರನಾರಾಯಣ ಅವರು ಬಿಸ್ಕೆಟ್, ಚಾಕೋಲೇಟ್, ಸೋಪುಗಳನ್ನು ವಿತರಿಸಿದರು. ಪ್ರತಿನಿತ್ಯ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಅವರಿಗೆ ಸೂಚಿಸಿದರು.