ಕರ್ನಾಟಕ

karnataka

ETV Bharat / state

ಹುತಾತ್ಮ ಯೋಧ ಗುರು ಕುಟುಂಬಕ್ಕೆ ಕೈವಾರದ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ - ಕೈವಾರದ ವಿದ್ಯಾರ್ಥಿಗಳು

ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಹುತಾತ್ಮರಾದ ಮಂಡ್ಯ ಜಿಲ್ಲೆಯ ಗುಡಗೆರೆ ಗ್ರಾಮದ ವೀರ ಯೋಧ ಗುರು ಅವರ ಕುಟುಂಬಕ್ಕೆ ಕೈವಾರದ ವಿದ್ಯಾರ್ಥಿಗಳು ದೇಣಿಗೆ ಸಂಗ್ರಹ ಮಾಡಿದರು.

ಕೈವಾರದ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ

By

Published : Feb 22, 2019, 9:51 AM IST

ಚಿಕ್ಕಬಳ್ಳಾಪುರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಹುತಾತ್ಮರಾದ ಯೋಧರಲ್ಲಿ ಮಂಡ್ಯ ಜಿಲ್ಲೆಯ ಗುಡಗೆರೆ ಗ್ರಾಮದ ವೀರ ಯೋಧ ಗುರು ಕೂಡ ಒಬ್ಬರು. ಅವರ ಕುಟುಂಬಕ್ಕೆ ನೆರವಾಗಲು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ದೇಣಿಗೆ ಸಂಗ್ರಹ ಮಾಡಿದ್ದಾರೆ.

ಕೈವಾರ ಗ್ರಾಮದ ಶಾಲೆಗಳಾದ ಶ್ರೀ ಯೋಗಿ ನಾರಾಯಣ ಪ್ರೌಢ ಶಾಲೆ, ಅಂಬೇಡ್ಕರ್ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಇತರೆ ಶಾಲೆ ವಿದ್ಯಾರ್ಥಿಗಳು ಹಾಗೂ ಶ್ರೀ ಯೋಗಿ ನಾರಾಯಣ ಶಾಲೆಯ ಹಳೆಯ ವಿದ್ಯಾರ್ಥಿಗಳು ಸಾರ್ವಜನಿಕ ಆಸ್ಪತ್ರೆಯಿಂದ ಸಾರ್ವಜನಿಕ ಬಸ್ ನಿಲ್ದಾಣದವರೆಗೂ ಮೆರವಣಿಗೆ ಹೊರಟು, ಪಾಕಿಸ್ತಾನದ ಉಗ್ರಗಾಮಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿ ಊರಿನ ಅಂಗಡಿಗಳಿಗೆ ಹೋಗಿ ಸುಮಾರು 25,000 ರೂ. ದೇಣಿಗೆ ಸಂಗ್ರಹಿಸಿದರು.

ಕೈವಾರದ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ

ಇದೇ ವೇಳೆ ಒಂದು ನಿಮಿಷಗಳ ಕಾಲ ಹುತಾತ್ಮರಾದ ಯೋಧರಿಗೆ ಮೌನಾಚರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿ ಮುಖಂಡರು ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

ABOUT THE AUTHOR

...view details