ಕರ್ನಾಟಕ

karnataka

ETV Bharat / state

ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆ - ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಕಾರ್ಮಿಕ ಸಂಘಟನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿ ಬಳಿಯ ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಕಾರ್ಮಿಕರು ಸಾವನ್ನಪ್ಪಿದ್ದು, ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆ
Labor organization activists protests in Chikkaballapur

By

Published : Feb 24, 2021, 7:38 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜಿಲಿಟಿನ್ ಸ್ಫೋಟದ ದುರಂತದಲ್ಲಿ ಮೃತರಾದ ಕಾರ್ಮಿಕರ ಕುಟುಂಬಗಳಿಗೆ 50 ಲಕ್ಷ ಪರಿಹಾರ ಒದಗಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿತು.

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆ

ನಗರದ ಶಿಡ್ಲಘಟ್ಟ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುವಂತೆ ಒತ್ತಾಯಿಸಿದರು.

ಇದೇ ವೇಳೆ ಮಾತಾನಾಡಿದ ಸಿಪಿಎಂ ಮುಖಂಡರೋರ್ವರು, ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತ ಕುಟುಂಬದ ಕಣ್ಣು ಹೊರೆಸಲು ಸಾಧ್ಯವಿಲ್ಲ. ಆದರಿಂದ ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ಒದಗಿಸಬೇಕು. ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ತಗೆದುಕೊಳ್ಳುತ್ತಿಲ್ಲ. ಕಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರೆ ಯಾವುದೇ ಪ್ರಯೋಜನವಿಲ್ಲ ಎಂದು ದೂರಿದರು.

ABOUT THE AUTHOR

...view details