ಬಾಗೇಪಲ್ಲಿ: ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ. ಆದಿಗಾನಹಳ್ಳಿ ಗ್ರಾಮದ 38 ವರ್ಷದ ಶ್ರೀನಿವಾಸ್ ಕೊಲೆಯಾದ ದುರ್ದೈವಿ.
ಚಿಕ್ಕಬಳ್ಳಾಪುರ: ಮನೆಗೆ ಮರಳುತ್ತಿದ್ದ ಕಾರ್ಮಿಕನ ಅಡ್ಡಗಟ್ಟಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು - chikkaballapur murder case
ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಕಾರ್ಮಿಕನ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಟೋಲ್ ಪ್ಲಾಜಾ ಬಳಿಯ ವೇ-ಬ್ರಿಡ್ಜ್ನಲ್ಲಿ ಕಾರ್ಮಿಕನಾಗಿದ್ದ ಶ್ರೀನಿವಾಸ್ ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳಗ್ಗೆ ಶ್ರೀನಿವಾಸ್ ಕೊಲೆ ಆಗಿರುವ ಬಗ್ಗೆ ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗಾಗಿ ಪೊಲೀಸ್ ತಂಡಗಳನ್ನ ರಚಿಸಿದ್ದು ತೀವ್ರ ಶೋಧ ಮುಂದುವರಿಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಗುಜರಾತ್: ಸ್ನಾನ ಮಾಡಲೆಂದು ಹೋಗಿ ಹೊಂಡದಲ್ಲಿ ಮುಳುಗಿ ಐವರು ಮಕ್ಕಳು ಸಾವು