ಕರ್ನಾಟಕ

karnataka

ETV Bharat / state

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ಗುಳುಂ..! - ಚಿಕ್ಕಬಳ್ಳಾಪುರ

ವಿಜಯಪುರ- ಕೋಲಾರ ಮುಖ್ಯರಸ್ತೆಯಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ತಮ್ಮ ಆಸ್ತಿ ಕಂಡವರ ಪಾಲಾಗಿದ್ದು, ಈ ಪ್ರಕರಣದ ಹಿಂದೆ ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯನ್ನು ರೈತರು ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತ ರೈತ

By

Published : Jun 19, 2019, 4:27 AM IST

ಚಿಕ್ಕಬಳ್ಳಾಪುರ:ಕೋಟ್ಯಾಂತರ ಬೆಲೆ ಬಾಳುವ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಿರುವ ಆರೋಪ ಶಿಡ್ಲಘಟ್ಟ ತಾಲೂಕಿನ ಕಾಳನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸರ್ವೇ ನಂ. 42ರಲ್ಲಿ ಆಂಜಿನಪ್ಪ ಎಂಬುವರ ಹೆಸರಲ್ಲಿ ಭೂಕಬಳಿಕೆಯಾಗಿರುವ ಆರೋಪ ಕೇಳಿ ಬಂದಿದೆ. ವಿಜಯಪುರ- ಕೋಲಾರ ಮುಖ್ಯರಸ್ತೆಯಲ್ಲಿರುವ ಜಮೀನು ಒಂಬತ್ತು ಜನರಿಗೆ ಸೇರಬೇಕಾದದ್ದು. ಆದರೆ, ಈಗ ಬೇರೆಯವರ ಪಾಲಾಗಿದೆ.

ಸರ್ವೆ ನಿರತ ಅಧಿಕಾರಿ ಹಾಗೂ ಸಂತ್ರಸ್ತ ರೈತ
ಸದ್ಯ ಜಮೀನು ಕಳೆದುಕೊಂಡವರು ನ್ಯಾಯಾಲಯದ ಮೊರೆ ಹೋಗಿದ್ದು, ಈ ಪ್ರಕರಣ ಕೋರ್ಟ್​ನಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿ ಸರ್ವೆ ನಡೆಸಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆಪಾದನೆ ಕೇಳಿಬಂದಿದೆ.

ಖರಾಬು ಜಮೀನು ಪರಭಾರೆ ಮಾಡಬಾರದೆಂಬ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಜಮೀನು ಲಪಟಾಯಿಸಿ ಅಧಿಕಾರಿಗಳೇ ಕಿರುಕುಳ ನೀಡುತ್ತಿದ್ದಾರೆ. ಇದರ ಹಿಂದೆ ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯನ್ನು ರೈತರು ವ್ಯಕ್ತಪಡಿಸಿದ್ದಾರೆ. ನ್ಯಾಯ ಕೇಳಲು ಹೋದ ರೈತ ನಾಗರಾಜು ಎಂಬುವವರಿಗೆ ಬೆದರಿಕೆಯ ಕರೆ ಮಾಡಿ ಕೊಲೆ ಮಾಡುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ ಎಂಬ ದೂರು ಸಹ ಕೇಳಿಬಂದಿದೆ.

ABOUT THE AUTHOR

...view details