ಚಿಕ್ಕಬಳ್ಳಾಪುರ: ರಸ್ತೆ ದಾಟುವ ವೇಳೆ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಆರೂರು ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಬಳಿಯ ಡಿವೈಡರ್ ಮೇಲೆ ಸುಮಾರು 2 ವರ್ಷದ ಚಿರತೆ ಸಾವನ್ನಪ್ಪಿದೆ. ಆರಂಭದಲ್ಲಿ ಚಿರತೆಯನ್ನು ನೋಡಿದ ಸವಾರರು ಗಾಬರಿಗೊಂಡಿದ್ದಾರೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಚಿರತೆ ಸಾವು - leopard dies Chikkaballapur
ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಬಳಿಕ ಚಿರತೆ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ಫೋಟೋ ತೆಗೆಯಲು ಜಮಾಯಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೆರೇಸಂದ್ರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು.