ಚಿಕ್ಕಬಳ್ಳಾಪುರ:ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಲೈನ್ಮ್ಯಾನ್ ವಿದ್ಯುತ್ ತಗುಲಿ ಸಾವು - line man death at Chikkaballpur
ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು
ಸೂಳೆಬಾವಿ ಗ್ರಾಮದ ನಾಗರಾಜ್ (26) ಮೃತಪಟ್ಟವ. ವಿದ್ಯುತ್ ಕಂಬದ ಮೇಲೆ ಜಂಪ್ ಸರಿಪಡಿಸುವ ವೇಳೆ ಈ ಅವಘಡ ಸಂಭವಿಸಿದೆ. ನಾಗರಾಜ್ ಒಂದು ವಾರದ ಹಿಂದೆಯಷ್ಟೇ ಮದುವೆ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಇನ್ನು ಈ ವರ್ಷದಲ್ಲಿ ವಿದ್ಯುತ್ ಶಾಕ್ ಹೊಡೆದು ಮೂರು ಜನ ಅಸುನೀಗಿದ್ದು, ಬೆಸ್ಕಾಂ ಇಲಾಖೆ, ಲೈನ್ ಮ್ಯಾನ್ಗಳ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Oct 24, 2019, 11:33 PM IST