ಚಿಂತಾಮಣಿ (ಚಿಕ್ಕಬಳ್ಳಾಪುರ) :ನ್ಯಾಯಮೂರ್ತಿ ಎ. ಜೆ. ಸದಾಶಿವ ಆಯೋಗ ವರದಿಯನ್ನು ಅನುಷ್ಠಾನಕ್ಕೆ ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ತರಲು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸೆಪ್ಟೆಂಬರ್ 14ರಂದು ಶಾಸಕರ ಮನೆಮುಂದೆ ಧರಣಿಗೆ ಕರೆ ನೀಡಿದ್ದಾರೆ.
ಸೆಪ್ಟೆಂಬರ್ 14 ರ ಸೋಮವಾರ ರಾಜ್ಯದ ಎಲ್ಲಾ ಶಾಸಕರುಗಳ ಮನೆ ಮುಂದೆ ಧರಣಿ, ಸತ್ಯಾಗ್ರಹ ಮತ್ತು ಮನವಿ ಪತ್ರ ಸಲ್ಲಿಕೆ ಹಾಗೂ ಚಿಂತಾಮಣಿ ವಿಧಾನಸಭಾ ಶಾಸಕರ ಮನೆ ಮುಂದೆ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ. ವಿ. ರಾಮಪ್ಪ ತಿಳಿಸಿದರು.