ಚಿಕ್ಕಬಳ್ಳಾಪುರ: ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ವ್ಯಕ್ತಿ ಕೇವಲ ಒಂದು ಗಂಟೆಯೊಳಗೆ ಪೊಲೀಸರ ಬಲೆಗೆ ಬಿದ್ದ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಚೌಕಬಾರ ಕಿರಿಕ್: ಪೇದೆ ಮೇಲೆ ಹಲ್ಲೆ ಮಾಡಿದ್ದವ ಒಂದೇ ಗಂಟೆಯಲ್ಲಿ ಅಂದರ್.! - ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಗಂಟೆಯಲ್ಲೇ ಬಂಧನ
ಕುರುಟಹಳ್ಳಿ ಗೇಟ್ ಬಳಿ ಚೌಕಬಾರ ಆಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಪೇದೆ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ವ್ಯಕ್ತಿಯನ್ನು ಒಂದೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಗಂಟೆಯಲ್ಲೇ ಬಂಧನ
ಕುರುಟಹಳ್ಳಿ ಗೇಟ್ ಬಳಿ ಚೌಕಾಬಾರ ಆಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸ್ ಪೇದೆಯೊಬ್ಬರು ಪ್ರಶ್ನಿಸಿದ್ದರು. ಈ ವೇಳೆ ಅದೇ ಗ್ರಾಮದ ಶೇಷಾದ್ರಿ (36) ಎಂಬಾತ ಪೇದೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು.
ಕೂಡಲೇ ಗ್ರಾಮಾಂತರ ಠಾಣೆಯ ಸಬ್ಇನ್ಸ್ಪೆಕ್ಟರ್ ನರೇಶ್ ನಾಯಕ್ ಕೇವಲ ಒಂದು ಗಂಟೆಯಲ್ಲೇ ಹಲ್ಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ಪ್ರಕರಣ ದಾಖಲಿಸಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲು ಮುಂದಾಗಿದ್ದಾರೆ.
Last Updated : May 17, 2020, 10:35 PM IST
TAGGED:
ಚಿಂತಾಮಣಿ ಗ್ರಾಮಾಂತರ ಠಾಣೆ