ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಗೇಟ್ ಬಳಿ ನಡೆದಿದೆ.
ಚಲಿಸುತ್ತಿದ್ದ ರೈಲಿನಡಿ ಸಿಲುಕಿ ವಾಟರ್‌ಮ್ಯಾನ್ ಸಾವು, ದೇಹ ಛಿದ್ರ - Chikkaballapur train accident
ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
train
ನಾರಾಯಣಸ್ವಾಮಿ (44) ಮೃತ ವ್ಯಕ್ತಿ. ಇವರು ವಾಟರ್ ಮ್ಯಾನ್ ಕೆಲಸ ಮಾಡುತ್ತಿದ್ದರು. ಚಿಕ್ಕಬಳ್ಳಾಪುರದಿಂದ ಚಿಂತಾಮಣಿ ಕಡೆಗೆ ರೈಲು ಸಂಚರಿಸುತ್ತಿದ್ದ ವೇಳೆ ಗಮನಿಸದೇ ರೈಲು ಹಳಿಯ ಮೇಲೆ ಬಂದಿದ್ದು, ರೈಲಿನ ಚಕ್ರ ತಲೆಯ ಮೇಲೆ ಹರಿದಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹ ಛಿದ್ರ ಛಿದ್ರವಾಗಿದೆ. ಚಿಕ್ಕಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.