ಚಿಕ್ಕಬಳ್ಳಾಪುರ:ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿಯ ಪೊತೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ನೇಣಿಗೆ ಶರಣು - Chikkaballapur latest news
ಅನಾರೋಗ್ಯ ಹಿನ್ನೆಲೆ ಮಾನಸಿಕವಾಗಿ ನೊಂದುಕೊಂಡಿದ್ದ ವ್ಯಕ್ತಿಯೊಬ್ಬ ತನ್ನ ಹಳೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಗ್ರಾಮದ ಪ್ರಕಾಶ್ (35) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಅನಾರೋಗ್ಯದಿಂದ ಬೇಸತ್ತಿದ್ದನು. ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಈತನಿಗಾಗಿ ಸಾಕಷ್ಟು ಹುಡಕಾಟ ನಡೆಸಿದ್ದರು. ಆದರೆ, ಪ್ರಕಾಶ್ ತನ್ನ ಹಾಳು ಬಿದ್ದ ಹಳೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೃತ ವ್ಯಕ್ತಿ ಮದುವೆಯಾಗಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅನಾರೋಗ್ಯ ಹಿನ್ನೆಲೆ ಮಾನಸಿಕನಾಗಿ ಸಾಕಷ್ಟು ಕುಗ್ಗಿದ್ದನು. ಇದರಿಂದ ಬೇಸತ್ತು ಆತ್ಮಾಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.