ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ವ್ಯಾನ್ ರಸ್ತೆ ಬದಿಯ ಮೋರಿಗೆ ಬಿದ್ದಿದೆ. ಈ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ-ಬಾಗೇಪಲ್ಲಿ ರಸ್ತೆಯ ನಾಯನಹಳ್ಳಿ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಮಾರುತಿ ವ್ಯಾನ್ ಪಲ್ಟಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ - ಚಿಕ್ಕಬಳ್ಳಾಪುರ ಅಪಘಾತ ಸುದ್ದಿ
ಮಾರುತಿ ವ್ಯಾನ್ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ-ಬಾಗೇಪಲ್ಲಿ ರಸ್ತೆಯ ನಾಯನಹಳ್ಳಿ ಬಳಿ ನಡೆದಿದೆ.
ಮಾರುತಿ ವ್ಯಾನ್ ಅಪಘಾತ
ತಾಲೂಕಿನ ಬಾರ್ಲಹಳ್ಳಿ ನಿವಾಸಿ, ನಗರದ ನಾರಾಯಣ ಪಿಯು ಕಾಲೇಜಿನ ಮಾಲೀಕ ಕೇಶವರೆಡ್ಡಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ ಎನ್ನಲಾಗಿದೆ. ನಗರದ ಹೊರವಲಯದ ಬುಕ್ಕನಹಳ್ಳಿಯ ಗೋವಿಂದ ಮತ್ತು ಚೇತನ್ ಎಂಬುವರು ಗಾಯಾಳುಗಳಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಗೋವಿಂದ ಮತ್ತು ಚೇತನ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಹಾಗೂ ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಈ ಸಂಬಂಧ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.