ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಾಸ್ಕ್ ಡೇ ಆಚರಣೆ - Chikkaballapura latest news

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಾಸ್ಕ್ ದಿನಾಚರಣೆ ಆಚರಣೆ ಮಾಡಲಾಯಿತು.

Chikkaballapura
Chikkaballapura

By

Published : Jun 18, 2020, 5:28 PM IST

ಚಿಕ್ಕಬಳ್ಳಾಪುರ:ಜಿಲ್ಲಾಡಳಿತ ವತಿಯಿಂದ ಕೊರೊನಾ ನಿಯಂತ್ರಣಕ್ಕಾಗಿ ಮಾಸ್ಕ್ ನ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೊರೊನಾ ನಿಯಂತ್ರಿಸುವ ಹೋರಾಟದಲ್ಲಿ ಮಾಸ್ಕ್ ಗಳ ಪಾತ್ರ ಮಹತ್ವದಾಗಿದೆ. ಜಿಲ್ಲೆಯ ಜನತೆ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು. ಈ ಮೂಲಕ ಮಾಹಾಮಾರಿ ಯ ವಿರುದ್ಧ ಹೋರಾಡಬೇಕೆಂದು‌ ಜಾಥಾದ ಉದ್ದಕ್ಕೂ ಜಾಗೃತಿ ಮೂಡಿಸಲಾಯಿತು.

ಜಾಥಾದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡು ಅರಿವು ಮೂಡಿಸಿದರು.

ಇನ್ನು ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ ಸೇರಿದಂತೆ ಗೌರಿಬಿದನೂರು ತಾಲೂಕಿನಾದ್ಯಂತ ಮಾಸ್ಕ್‌ ದಿನಾಚರಣೆಯನ್ನು ಆಚರಣೆ ಮಾಡಿದರು.

ABOUT THE AUTHOR

...view details