ಕರ್ನಾಟಕ

karnataka

ETV Bharat / state

ಮರಕ್ಕೆ ನೇಣು ಬಿಗಿದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ - Mental patient suicides in Chikkaballapur

ಮರಕ್ಕೆ ನೇಣು ಬಿಗಿದುಕೊಂಡು ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

sdd
ಮರಕ್ಕೆ ನೇಣು ಬಿಗಿದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ

By

Published : Nov 28, 2020, 9:26 AM IST

ಗೌರಿಬಿದನೂರು(ಚಿಕ್ಕಬಳ್ಳಾಪುರ): ಮಾನಸಿಕ ಅಸ್ವಸ್ಥ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತಾಲೂಕಿನ ಕೋಟನಪಲ್ಲಿ ಬಳಿ ನಡೆದಿದೆ.

ಕೃಷ್ಣಪ್ಪ (50) ಮೃತ ವ್ಯಕ್ತಿಯಾಗಿದ್ದು, ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಕಳೆದ 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ಈತನ ಶವ ಗ್ರಾಮದ ಹೊರವಲಯದ ಜಮೀನೊಂದರ ಮರದಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ 2 ಮದುವೆ ಆಗಿರುವುದಾಗಿ ತಿಳಿದು ಬಂದಿದ್ದು, ಮೊದಲ ಪತ್ನಿ ಕಳೆದ 20 ವರ್ಷಗಳ ಹಿಂದೆ ಈತನಿಂದ ದೂರವಾಗಿದ್ದಾಳೆ.

ನಂತರ ಎರಡನೇ ಮದುವೆಯಾಗಿದ್ದ ಈತನನ್ನು 2ನೇ ಹೆಂಡತಿಯೂ ಬಿಟ್ಟು ಹೋಗಿದ್ದಳು. ಇಬ್ಬರು ಮಕ್ಕಳೊಂದಿಗೆ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು, ಈಗ ಶವವಾಗಿ ಪತ್ತೆಯಾಗಿದ್ದಾನೆ. ಈ ಸಂಬಂಧ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪಿಎಸ್ ಐ ಮೋಹನ್ ಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details