ಚಿಕ್ಕಬಳ್ಳಾಪುರ:ಮಾಜಿ ಮುಖ್ಯಮಂತ್ರಿಯೊಬ್ಬರು ಬಿಜೆಪಿಯಲ್ಲಿ 500 ಮತ ಇಲ್ಲ ಅಂತಾ ಹೇಳಿದ್ರು. ಆದರೆ ಫಲಿತಾಂಶದ ದಿನ ಗೆಲ್ಲುವ ಅಭ್ಯರ್ಥಿ ಯಾರು? ಎಂಬುದು ಗೊತ್ತಾಗಲಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ರು.
ಸ್ವ-ಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಅಧಿಕಾರಿಗಳು ಒಳ್ಳೆಯ ವ್ಯವಸ್ಥೆ ಮಾಡಿದ್ದಾರೆ. ಮತದಾನದಲ್ಲಿ ಯಾವ ರೀತಿ ಗೌಪ್ಯತೆ ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಕ್ತ ಭಧ್ರತೆ ನೀಡಿದ್ದಾರೆ. ಅವರಿಗೆ ಅಭಿನಂದನೆ. ನಾನು ಒಬ್ಬ ಶಾಸಕನಾಗಿ ಮತ ಕೇಂದ್ರಕ್ಕೆ ಹೋಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ನಮ್ಮ ಅಭ್ಯರ್ಥಿ ವೇಣುಗೋಪಾಲ್ ಬಹುಮತದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.