ಬಾಗೇಪಲ್ಲಿ: ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಕೆ.ಸುಧಾಕರ್ ಮೊದಲ ಬಾರಿಗೆ ಬಾಗೇಪಲ್ಲಿ ತಾಲೂಕಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಕೊರೊನಾ ಸೋಂಕು ತಡೆಗಟ್ಟುವ ಕ್ರಮಗಳ ಕುರಿತು ಚರ್ಚೆ ನಡೆಸಿದರು.
ನಿರಾಶ್ರಿತರ ಸಮಸ್ಯೆ ಆಲಿಸಿದ ವೈದ್ಯಕೀಯ ಶಿಕ್ಷಣ ಸಚಿವ - ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ಬಾಗೇಪಲ್ಲಿ ತಾಲೂಕಿಗೆ ಆಗಮಿಸಿ ನಿರಾಶ್ರಿತರ ಸಮಸ್ಯೆ ಆಲಿಸಿದ ಡಾ. ಕೆ.ಸುಧಾಕರ್, ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ತಾಲೂಕಿನಲ್ಲಿ ಈವರೆಗೂ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ವಲಸೆ ಬಂದ ನಿರಾಶ್ರಿತರ ಸಂಖ್ಯೆಯೂ ಇಲ್ಲಿ ಹೆಚ್ಚಾಗಿದೆ. ಇವರಿಗಾಗಿ ಊಟ ಮತ್ತು ವಸತಿ ವ್ಯವಸ್ಥೆಯನ್ನು ಬಾಗೇಪಲ್ಲಿ ನಗರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯ ಮತ್ತು ಬಾಲಕಿಯರ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾಡಲಾಗಿದೆ.
ಸುಧಾಕರ್ ನಿರಾಶ್ರಿತರನ್ನು ಭೇಟಿ ಮಾಡಿ ಕುಂದು-ಕೊರತೆಗಳನ್ನು ವಿಚಾರಿಸಿದರು. ಲಾಕ್ಡೌನ್ ಪರಿಣಾಮ ವಾಹನಗಳ ಸಂಚಾರ ಸ್ಥಗಿತ ಮಾಡಲಾಗಿದೆ. ದೇಶದಲ್ಲಿ ಪರಿಸ್ಥಿತಿ ಹತೋಟಿಗೆ ಬಂದ ತಕ್ಷಣವೇ ನಿಮ್ಮ ತವರಿಗೆ ಕಳುಹಿಸಿಕೊಡಲಾಗುವುದು. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ಹೇಳಿದರು.