ಚಿಕ್ಕಬಳ್ಳಾಪುರ :ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ 450ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ (Minister Sudhakar) ಭರವಸೆ ನೀಡಿದರು.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಹಾನಿಗೊಳಗಾಗದ ಪ್ರದೇಶಗಳಿಗೆ ಸಚಿವ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಜನರಿಗೆ ಧೈರ್ಯ ತುಂಬಿ ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ದಶಗಳ ನಂತರ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂತಹ ಮಹಾ ಮಳೆಯನ್ನು ನೋಡುತ್ತಿದ್ದೇನೆ. ಜಿಲ್ಲೆಯ ಬಹುತೇಕ ಕೆರೆಗಳು ತುಂಬಿರುವ ಸಂತೋಷ ಒಂದು ಕಡೆಯಾದರೆ, ಸಾವಿರಾರು ಹೆಕ್ಟೇರ್ಗಳಷ್ಟು ಬೆಳೆ ನಾಶವಾಗಿರುವ ದುಃಖ ಇದೆ.
ಸತತವಾಗಿ ಸುರಿಯುತ್ತಿರುವ ಮಳೆಗೆ 436 ಮನೆಗಳು ಹಾನಿಗೊಂಡಿವೆ. ಇವೆಲ್ಲವನ್ನು ನಾವು ಸರ್ಕಾರದ ಗಮನಕ್ಕೆ ತಂದು ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಕೊಡಿಸುವುದಾಗಿ (Sudhakar announces Rs 5 lakh compensation for homeless)ಭರವಸೆ ನೀಡಿದರು.