ಚಿಕ್ಕಬಳ್ಳಾಪುರ:ಡಿಸಿಸಿ ಬ್ಯಾಂಕ್ನಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿದ್ದು, ಇದರ ಬಗ್ಗೆ ಸರ್ಕಾರ ತನಿಖೆ ನಡೆಸಿದೆ. ಇದರ ಸತ್ಯಾಸತ್ಯತೆ ಹೊರಬರಲಿದೆ. ನಂತರ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಕೋಚಿಮುಲ್ ವಿಭಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವ ಹಿನ್ನೆಲೆ ನಗರದಲ್ಲಿ ಸಚಿವರು ಹಾಗೂ ಸಿಎಂ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಜನತೆ ಹಾಗೂ ರೈತರು ಸಂಭ್ರಮಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷಗಳಾಗಿದೆ. ಸಚಿವ ಸಂಪುಟದಲ್ಲಿ ಕೋಚಿಮುಲ್ ವಿಭಜನೆಗೆ ಅನುಮೋದನೆ ಸಿಕ್ಕಿದೆ. ಆದರೆ, ಈಗ ಚಕಾರ ಎತ್ತುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದರು.
ಕೆಲವರು ಶಕುನಿ ಬುದ್ದಿಯನ್ನು ತೋರುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಶಕುನಿ ಬುದ್ದಿಯನ್ನು ಹೊಂದಿರುವ ಶಾಸಕ ಶಿವಶಂಕರ್ ರೆಡ್ಡಿ ತಕರಾರು ಮಾಡುತ್ತಿದ್ದಾರೆ. ಅವರು ಸಚಿವರಿದ್ದಾಗ ವಿಭಜನೆಗೆ ಅನುಮೋದನೆ ನೀಡಿದ್ರು. ಈಗ ಬೇಡ ಎನ್ನುತ್ತಿದ್ದಾರೆ ಎಂದರು.