ಚಿಕ್ಕಬಳ್ಳಾಪುರ:ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕರೊಬ್ಬರು ಜಿಲ್ಲೆಯ ಜಕ್ಕಲಮಡುಗು ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ನಾಪತ್ತೆಯಾಗಿದ್ದ ಶಿಕ್ಷಕ ಜಕ್ಕಲಮಡುಗು ಜಲಾಶಯದಲ್ಲಿ ಶವವಾಗಿ ಪತ್ತೆ - ಚಿಕ್ಕಬಳ್ಳಾಪುರ ಸುದ್ದಿ
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸರ್ಕಾರಿ ಶಾಲೆ ಶಿಕ್ಷಕ ಜಕ್ಕಲಮಡುಗು ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
![ನಾಪತ್ತೆಯಾಗಿದ್ದ ಶಿಕ್ಷಕ ಜಕ್ಕಲಮಡುಗು ಜಲಾಶಯದಲ್ಲಿ ಶವವಾಗಿ ಪತ್ತೆ missing teacher was found dead in the Jakkalamadugu reservoir](https://etvbharatimages.akamaized.net/etvbharat/prod-images/768-512-8477309-1073-8477309-1597832865400.jpg)
ಶ್ರೀನಿವಾಸ ರೆಡ್ಡಿ (55) ಮೃತ ಶಿಕ್ಷಕ. ಗೌರಿಬಿದನೂರು ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಶ್ರೀನಿವಾಸ ರೆಡ್ಡಿ, ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿರುವುದಾಗಿ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇಂದು ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡುಗು ಜಲಾಶಯದ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಸದ್ಯ, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.