ಚಿಕ್ಕಬಳ್ಳಾಪುರ:ತನ್ನ ಕ್ಷೇತ್ರದ ಶಿಡ್ಲಘಟ್ಟ ತಾಲೂಕಿನ ತಾತಳ್ಳಿ ಅರಣ್ಯದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಶಾಸಕ ವಿ.ಮುನಿಯಪ್ಪ ಆರೋಪ ಮಾಡಿದ್ದಾರೆ.
ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ: ಶಾಸಕ ವಿ.ಮುನಿಯಪ್ಪ ಅಸಮಾಧಾನ - ಡಾ.ಕೆ.ಸುಧಾಕರ್
ನನ್ನ ಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ನನಗೆ ಗೊತ್ತೇ ಇಲ್ಲ ಎಂದು ಶಾಸಕ ವಿ.ಮುನಿಯಪ್ಪ ಸಚಿವ ಡಾ. ಕೆ.ಸುಧಾಕರ್ ಹಾಗೂ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

muniyappa
ಶಾಸಕ ವಿ.ಮುನಿಯಪ್ಪ ಅಸಮಾಧಾನ
ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್ ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ನನಗೆ ಮಾಹಿತಿ ನೀಡಿಲ್ಲ. ಕಾಟಾಚಾರಕ್ಕೆ ನನಗೆ ಕರೆ ಮಾಡಿ ತಿಳಿಸಿದ್ದಾರೆ ಅಷ್ಟೇ. ಅಧಿಕೃತ ಆಹ್ವಾನ ನೀಡಿಲ್ಲ. ನನ್ನ ಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ.
ಇದೇ ಕಾರಣದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸಚಿವ ಡಾ. ಕೆ.ಸುಧಾಕರ್ ಹಾಗೂ ಜಿಲ್ಲಾಡಳಿತದ ವಿರುದ್ಧ ಶಾಸಕ ವಿ.ಮುನಿಯಪ್ಪ ಅಸಮಾಧಾನ ಹೊರ ಹಾಕಿದ್ದಾರೆ.
Last Updated : Jun 5, 2020, 6:02 PM IST