ಕರ್ನಾಟಕ

karnataka

ETV Bharat / state

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದ ಶಾಸಕ ಸುಬ್ಬಾರೆಡ್ಡಿ - ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಹಲವು ಗ್ರಾಮಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ ನೀಡಿದರು.

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದ ಶಾಸಕ ಸುಬ್ಬಾರೆಡ್ಡಿ

By

Published : Oct 8, 2019, 5:00 AM IST


ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದ ಜನರ ಆರೋಗ್ಯ ಉತ್ತಮವಾಗಿರಿಸುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗುತ್ತಿದೆ. ಗ್ರಾಮೀಣ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದ ಶಾಸಕ ಸುಬ್ಬಾರೆಡ್ಡಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಕೊಂಡರೆಡ್ಡಿಹಳ್ಳಿ, ಮಾಚಹಳ್ಳಿ, ಕೋರೇನಹಳ್ಳಿ, ಬುಳ್ಳಸಂದ್ರ, ಕೋರೇನಹಳ್ಳಿ ಮತ್ತು ಜೆ.ಪಿ. ನಗರದ ಪ್ರತಿ ಘಟಕಕ್ಕೆ 12 ಲಕ್ಷ ದಂತೆ 60 ಲಕ್ಷ ವೆಚ್ಚದಲ್ಲಿ ಒಟ್ಟು 5 ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಗುಡಿಬಂಡೆ ತಾಲೂಕಿನಲ್ಲಿ ಪ್ಲೋರಿಸಿಸ್ ಅಂಶ ಹೆಚ್ಚಾಗಿರುವುದರಿಂದ ಈಗಾಗಲೇ ಸುಮಾರು 70 ಶುದ್ಧ ಕುಡಿಯುವ ನೀರಿನ ಘಟಕಗಳನ್ನು 70 ಗ್ರಾಮಗಳಲ್ಲಿ ಸ್ಥಾಪಿಸಲಾಗಿದೆ. ಇನ್ನು ಸೋಮೇನಹಳ್ಳಿ, ದಿನ್ನಹಳ್ಳಿ, ಗೆಗ್ಗಿಳರಾಳ್ಳಹಳ್ಳಿ ಈ ಮೂರು ಗ್ರಾಮಗಳಲ್ಲಿ ಮುಂದಿನ ವಾರದಲ್ಲಿ ಘಟಕ ಉದ್ಘಾಟನೆ ಮಾಡಲಾಗುವುದು. ಇಷ್ಟಲ್ಲದೇ ಇನ್ನು 15 ಹೊಸ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ತಾಲೂಕಿನ ಶೇ. 80 ರಷ್ಟು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದೆ. ಜನರು ನೀರಿನ ಮಹತ್ವ ಅರಿತು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಿ, ಸುಲಭ ದರದಲ್ಲಿ ತಮ್ಮ ಗ್ರಾಮಗಳಲ್ಲೇ ಶುದ್ಧ ನೀರು ಸಿಗಲಿದೆ, ಎಲ್ಲಾ ಗ್ರಾಮೀಣ ಜನರು ಶುದ್ಧ ಕುಡಿಯುವ ನೀರಿನ ಬಳಕೆ ಮಾಡುತ್ತಿರುವುದರಿಂದ ಪ್ಲೋರೋಸಿಸ್ ಕಾಯಿಲೆಗಳು ಕಡಿಮೆಯಾಗಿವೆ ಎಂದು ಶಾಸಕರು ತಿಳಿಸಿದರು.

ABOUT THE AUTHOR

...view details