ಕರ್ನಾಟಕ

karnataka

ETV Bharat / state

ಕೋವಿಡ್ ಲಸಿಕೆ ಸಂಗ್ರಹ ಮತ್ತು ವಿತರಣೆಗೆ ಸೂಕ್ತ ಸಿದ್ಧತೆ ಕೈಗೊಳ್ಳಿ: ಸಂಸದ ಬಿ.ಎನ್.ಬಚ್ಚೇಗೌಡ - COVId 19 latest news

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 17,482 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 16,933 ಮಂದಿ ಗುಣಮುಖರಾಗಿದ್ದಾರೆ, 407 ಸಕ್ರಿಯ ಪ್ರಕರಣಗಳಿದ್ದು, 142 ಮಂದಿ ಮೃತಪಟ್ಟಿದ್ದಾರೆ.

ಸಂಸದ ಬಿ.ಎನ್.ಬಚ್ಚೇಗೌಡ
ಸಂಸದ ಬಿ.ಎನ್.ಬಚ್ಚೇಗೌಡ

By

Published : Nov 28, 2020, 5:12 AM IST

ದೇವನಹಳ್ಳಿ: ಕೋವಿಡ್ ಸೋಂಕಿಗೆ ಶೀಘ್ರದಲ್ಲೇ ಲಸಿಕೆ ಲಭ್ಯವಾಗಲಿದ್ದು, ಸಂಗ್ರಹಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ವಿತರಣೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಜ್ವಲಂತ ಸಮಸ್ಯೆಯಾಗಿರುವ ಕೋವಿಡ್‌ನಿಂದಾಗಿ ದೇಶಾದ್ಯಂತ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಕುರಿತಾಗಿ ಜಿಲ್ಲೆಯ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಲಸಿಕೆ ವಿತರಣೆಗೆ ಅವಶ್ಯವಿರುವ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಸಂಸದ ಬಿ.ಎನ್.ಬಚ್ಚೇಗೌಡ

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 17,482 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 16,933 ಮಂದಿ ಗುಣಮುಖರಾಗಿದ್ದಾರೆ, 407 ಸಕ್ರಿಯ ಪ್ರಕರಣಗಳಿದ್ದು, 142 ಮಂದಿ ಮೃತಪಟ್ಟಿದ್ದಾರೆ. ಜುಲೈನಲ್ಲಿ ಶೇ‌.24.09% ರಷ್ಟಿದ್ದ ಕೋವಿಡ್ ಪಾಸಿಟಿವ್ ಪ್ರಮಾಣ ನವೆಂಬರ್ ವೇಳೆಗೆ ಶೇ.3.85% ರಷ್ಟು ತಲುಪಿದ್ದು, ಒಟ್ಟು ಚೇತರಿಕೆ ಪ್ರಮಾಣ ಶೇ.96.81% ರಷ್ಟಿದ್ದು, ರಾಜ್ಯದಲ್ಲಿ ಜಿಲ್ಲೆ 14ನೇ ಸ್ಥಾನದಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ABOUT THE AUTHOR

...view details