ಚಿಕ್ಕಬಳ್ಳಾಪುರ: ಕೋಲಾರ ಸಂಸದ ಎಸ್.ಮುನಿಸ್ವಾಮಿ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕರ ಮನೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ.
ಕ್ಷೇತ್ರದ ಜನತೆ ಜನ ನಾಯಕರ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳುವುದು ಸಹಜ. ಆದರೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರವನ್ನು ಪಡೆದುಕೊಂಡಿರುವ ಚಿಂತಾಮಣಿ ಕ್ಷೇತ್ರಕ್ಕೆ ಸಂಸದರು ಭೇಟಿ ನೀಡಿದ್ದು, ಮಾಜಿ ಶಾಸಕ ಎಂ.ಸಿ.ಸುಧಾಕರ್ ಮನೆಗೆ ಭೇಟಿ ನೀಡಿದ ವೇಳೆ ಹಲವು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.