ಚಿಕ್ಕಬಳ್ಳಾಪುರ: ಸಂಸದರು ಬರುವುದಕ್ಕೂ ಮೊದಲೇ ಬೆಸ್ಕಾಂ ಕಚೇರಿ ಉದ್ಘಾಟನೆ ಮಾಡಿದ ಶಾಸಕ ಎಂ. ಕೃಷ್ಣಾರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಸದ ಎಸ್.ಮುನಿಸ್ವಾಮಿ, ತುಘಲಕ್ ದರ್ಬಾರ್ ಮಾಡುವುದನ್ನು ನಿಲ್ಲಿಸಬೇಕು ಎಂದು ಟಾಂಗ್ ನೀಡಿದ್ದಾರೆ.
ಲೋಕಸಭೆ ಹಾಗೂ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಬೆಸ್ಕಾಂ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುವುದಿಲ್ಲ. ಕಾರ್ಯಕ್ರಮವನ್ನು ಮುಂದೂಡಿ ಎಂದು ತಿಳಿಸಿದ್ದರೂ ಸಹ ಶಿಷ್ಟಾಚಾರವನ್ನು ಉಲ್ಲಂಘಿಸಿ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಸಂಸದ ಎಸ್. ಮುನಿಸ್ವಾಮಿ ಒತ್ತಾಯಿಸಿದ್ದು, ಇದೇ ವೇಳೆ ಸ್ಥಳೀಯ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.