ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯಲ್ಲಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಸಂಸದ ಎಸ್.ಮುನಿಸ್ವಾಮಿ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ಮುನಿಸ್ವಾಮಿ - ಸಂಸದ ಮುನಿಸ್ವಾಮಿ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಸಂಸದ ಮುನಿಸ್ವಾಮಿ ಭೇಟಿ ನೀಡಿದ್ದು, ಸಿಬ್ಬಂದಿಯ ಕುಂದು ಕೊರತೆ ಆಲಿಸಿ, ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ಮುನಿಸ್ವಾಮಿ
ಆಸ್ಪತ್ರೆಯಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ಸಂಸದರು, ಹೆರಿಗೆ ವಾರ್ಡ್‌ಗೆ ಭೇಟಿ ನೀಡಿ ತಾಯಿ ಮತ್ತು ಮಕ್ಕಳ ಆರೋಗ್ಯವನ್ನು ವಿಚಾರಿಸಿದರು. ಇದೇ ವೇಳೆ ವೈದ್ಯ ಸಿಬ್ಬಂದಿಗೆ ಸಲಹೆ ನೀಡಿದ್ದು, ಸಿಸೇರಿಯನ್ ಬದಲಾಗಿ ಸಮಾನ್ಯ ಹೆರಿಗೆ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ ಎಂದರು.
ಇದಾದ ಬಳಿಕ ಆಸ್ಪತ್ರೆ ಸಿಬ್ಬಂದಿಯ ಕುಂದು-ಕೊರತೆಗಳನ್ನು ಆಲಿಸಿದ ಅವರು, ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.