ಚಿಕ್ಕಬಳ್ಳಾಪುರ:ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಖಜಾನೆಯಲ್ಲಿ ದುಡ್ಡಿಲ್ಲದಿದ್ದರೂ ಶಾಸಕರು ನಾನು ಹಣ ಬಿಡುಗಡೆ ಮಾಡಿಸಿದ್ದೇನೆ ಅಂತಾ ಜನರ ಮುಂದೆ ಡ್ರಾಮಾ ಮಾಡಿ ಜನರನ್ನು ದಾರಿ ತಪ್ಪಿಸಿ ಇದೀಗ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ಧ ಕಿಡಿಕಾರಿದರು.
ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ: ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಸಂಸದ ಮುನಿಸ್ವಾಮಿ ಕಿಡಿ - ಅಭಿವೃದ್ಧಿ ಕಾಮಗಾರಿ
ಜನರನ್ನು ದಾರಿ ತಪ್ಪಿಸಿ ಇದೀಗ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ಧ ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದಿಂದ ಮಹಿಳಾ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತೆ ಅಂತಾ ಶಾಸಕರಿಗೇ ಗ್ಯಾರಂಟಿ ಇರಲಿಲ್ಲ. ಖಜಾನೆಯಲ್ಲಿ ದುಡ್ಡಿಲ್ಲ ಅಂತ ಹೇಳಿದರೂ ಕೂಡ ಇವರು ಆತುರವಾಗಿ ಅಭಿವೃದ್ಧಿ ಕಾಮಗಾರಿಗಳು ಅಂತ ಹೇಳಿ ಹಣ ಬಿಡುಗಡೆ ಮಾಡಿಸಿಕೊಂಡು ಬಂದಿದ್ದೇನೆ ಎಂದು ಜನರ ಮುಂದೆ ಡ್ರಾಮಾ ಮಾಡಿದ್ದಾರೆ ಎಂದು ಹೇಳಿದರು.
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನೀವು ನಿಜವಾಗಿಯೂ ಕಷ್ಟಪಟ್ಟು ಹಣ ತಂದಿದ್ದರೆ ನಾನೇ ಮುಖ್ಯಮಂತ್ರಿ ಹತ್ತಿರ ಹೋಗಿ ಮತ್ತೆ ಹಣ ಬಿಡುಗಡೆ ಮಾಡಿಸುತ್ತೇನೆ. ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡೋದು ಬಿಡಬೇಕು. ಕೆಲವರು ಅವರ ಯೋಗ್ಯತೆಗೆ ತಕ್ಕಂತೆ ಅನುದಾನ ತಂದು ತಾಲೂಕಿನ ಸೇವೆ ಮಾಡುತ್ತಿದ್ದಾರೆ ಎಂದರು.