ಚಿಕ್ಕಬಳ್ಳಾಪುರ: ಹಳೇ ದ್ವೇಷದ ಹಿನ್ನೆಲೆ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯನ್ನು ಹಿಂಬಾಲಿಸಿ ಲಾಂಗ್ ಮಚ್ಚುಗಳಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಫೈರೋಜ್ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಕ್ಕದ ರಸ್ತೆಯಲ್ಲಿ ಖಲಂಧರ್ ಮತ್ತು ಆತನ ಸಹಚರರು ಫೈರೋಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಫೈರೋಜ್ ಅಲ್ಲಿಂದ ತಪ್ಪಿಸಿಕೊಂಡು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಆತನ ಕೈ-ಬೆರಳು ಕಟ್ಆಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.