ಚಿಕ್ಕಬಳ್ಳಾಪುರ:ನೂತನವಾಗಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜು ಕಟ್ಟಡದ ಕಾಂಕ್ರೀಟ್ ಕುಸಿದು 8ಕ್ಕೂ ಅಧಿಕ ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ಆರೂರು ಬಳಿ ನಡೆದಿದೆ. ಬಹುಕೋಟಿ ವೆಚ್ಚದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತ್ತಿದೆ. ನೂತನ ವರ್ಷಕ್ಕೆ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವರು ಸಾಕಷ್ಟು ಸೂಚನೆಗಳನ್ನು ನೀಡಿದ್ದರು. ಆದರೆ ಕಳೆದ ರಾತ್ರಿ ಇದ್ದಕ್ಕಿದ್ದಂತೆ ಕಾಂಕ್ರೀಟ್ ಕುಸಿದು ಬಿತ್ತು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸ ಮೆಡಿಕಲ್ ಕಾಲೇಜು ಕಟ್ಟಡದ ಕಾಂಕ್ರೀಟ್ ಕುಸಿತ: 8ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ - ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿ
ಮೆಡಿಕಲ್ ಕಾಲೇಜು ಕಟ್ಟಡದ ಕಾಂಕ್ರೀಟ್ ಕುಸಿದು ಸಂಭವಿಸಿದ ಅವಘಡದಲ್ಲಿ ಹಲವು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡರು. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೆಡಿಕಲ್ ಕಾಲೇಜು ಕಟ್ಟಡದ ಕಾಂಕ್ರೀಟ್ ಕುಸಿದಿರುವುದು
Last Updated : Dec 25, 2022, 1:22 PM IST