ಚಿಕ್ಕಮಗಳೂರು:ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಸಾರ್ಯ, ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳನ್ನು ಭದ್ರಾ ಹುಲಿ ಯೋಜನೆಯ ಬಫರ್ ಝೋನ್ಗೆ ಸೇರಿಸುವುದನ್ನು ವಿರೋಧಿಸಿ ಅಲ್ಲಿನ ಗ್ರಾಮಸ್ಥರು ಸಾಮೂಹಿಕ ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಅಂಚೆ ಪತ್ರ ಬರೆದಿದ್ದಾರೆ.
ಗ್ರಾಮಸ್ಥರ ಅಳಲನ್ನು ಕೇಳಲು ಅರಣ್ಯ ಇಲಾಖೆ ಮತ್ತು ಸರ್ಕಾರ ಸಿದ್ಧವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಕೂಡ ಗ್ರಾಮಸ್ಥರು ಹುಲಿ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ:18ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ ಅಳಿಲಿಗೆ ದಯಾಮರಣ ಶಿಕ್ಷೆ